ಕೋವಿಡ್ -19 ವೈರಸ್ ನಿಂದ ಬಳಲಿದವರ ಆರೋಗ್ಯ ಸುಧಾರಿಸಿದ ಹಿನ್ನೆಲೆಯಲ್ಲಿ ಇಬ್ಬರನ್ನು ಬಿಡುಗಡೆ ಮಾಡಲಾಗಿದೆ. ಬೆಳಗಾವಿಯಲ್ಲಿ ಕೋವಿಡ್-19 ಸೋಂಕು ತಗುಲಿದ್ದ ಇಬ್ಬರು ವ್ಯಕ್ತಿಗಳು ಸಂಪೂರ್ಣ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ.ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಗ್ರಾಮದ 20 ವರ್ಷದ ಯುವಕ ಹಾಗೂ ರಾಯಬಾಗ ತಾಲ್ಲೂಕು ಕುಡಚಿಯ 40 ವರ್ಷದ ವ್ಯಕ್ತಿಯನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ.ಈ ಇಬ್ಬರೂ ಏಪ್ರಿಲ್