ಮಡಿಕೇರಿ : ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ಇಂದು ಒಂದೇ ದಿನ 28 ವಿದ್ಯಾರ್ಥಿಗಳು ಸೇರಿದಂತೆ 49 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಆಲ್ಲೂರು ಸಿದ್ಧಾಪುರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 19 ವಿದ್ಯಾರ್ಥಿಗಳಿಗೆ ಪಾಸಿಟಿವ್ ಇರುವುದು ದೃಢವಾಗಿದೆ. ಶಾಲೆಯ 8, 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಸೋಂಕು ಕಾಣಿಸಿಕೊಂಡಿದೆ. ಶಾಲೆಯಲ್ಲಿರುವ ಒಟ್ಟು 210 ವಿದ್ಯಾರ್ಥಿಗಳ ಪೈಕಿ