ತುಮಕೂರು : ಓಮಿಕ್ರಾನ್ ಆತಂಕದ ನಡುವೆ ತುಮಕೂರು ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ನಿಧಾನವಾಗಿ ಏರುತ್ತಿದೆ. 10 ದಿನದಲ್ಲಿ 109 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಅದರಲ್ಲೂ 42 ಜನ ಮಕ್ಕಳಿಗೆ ಸೋಂಕು ಕಾಣಿಸಿಕೊಂಡಿದ್ದು ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ. ಹೌದು. ಕೋವಿಡ್ 2ನೇ ಅಲೆಯಲ್ಲಿ ಬೆಂಗಳೂರು ಹೊರತುಪಡಿಸಿದರೆ ಅತಿ ಹೆಚ್ಚು ಪಾಸಿಟಿವ್ ಪ್ರಕರಣ ಹಾಗೂ ಸಾವಿನಿಂದಾಗಿ ತುಮಕೂರು ಜಿಲ್ಲೆ ತಲ್ಲಣಗೊಂಡಿತ್ತು. ಕಳೆದ ಎರಡ್ಮೂರು ತಿಂಗಳಿಂದ ಪಾಸಿಟಿವ್ ಪ್ರಕರಣ ಒಂದಂಕಿಗೆ ಇಳಿದಿತ್ತು. ಆದರೆ