ಬೆಂಗಳೂರು : ಹಲವು ತಿಂಗಳುಗಳಿಂದ ನಡೆಯುತ್ತಿರುವ ಕೆಪಿಸಿಸಿ ಪುನಾರಚನೆ ಕುರಿತ ಕಸರತ್ತುಗಳು ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಅಕ್ಟೋಬರ್ 19 ಮತ್ತು 20 ರಂದು ರಾಜ್ಯಕ್ಕೆ ಬರುವ ನಿರೀಕ್ಷೆಯಿದ್ದು, ಪಕ್ಷದ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆಂದು ತಿಳಿದುಬಂದಿದೆ. ಈ ಕುರಿತು ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು, ಸಿಂದಗಿ ಹಾಗೂ ಹಾನಗಲ್ ಚುನಾವಣೆ ಹಿನ್ನೆಲೆಯಲ್ಲಿ ಸುರ್ಜೇವಾಲಾ