ಕಾಂಗ್ರೆಸ್ ಮೊದಲ ಪಟ್ಟಿ ಬಳಿಕ 2ನೇ ಹಂತದ ಪಟ್ಟಿ ಅಂತಿಮಗೊಳಿಸುವ ನಿಟ್ಟಿನಲ್ಲಿ ಕಸರತ್ತು ಶುರುವಾಗಿದೆ. ಶನಿವಾರ 124 ಮಂದಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಆದರೆ ಮೊದಲ ಪಟ್ಟಿಯಲ್ಲಿ ಆರು ಮಂದಿ ಹಾಲಿ ಶಾಸಕರ ಹೆಸರು ಕೈಬಿಡಲಾಗಿದೆ. ಈ ನಿಟ್ಟಿನಲ್ಲಿ ಎರಡನೇ ಹಂತದ ಪಟ್ಟಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ಸೋಮವಾರ ಉಳಿದ ನೂರು ಕ್ಷೇತ್ರಗಳ ಅಭ್ಯರ್ಥಿಯ ಆಯ್ಕೆಯ ಕುರಿತಾಗಿ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಯಲಿದೆ.