ಕೆಪಿಎಸ್ಸಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳ ಬಂಧನ ಮಾಡಲಾಗಿದ್ದು, ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 16 ಕ್ಕೆ ಏರಿಕೆಯಾದಂತಾಗಿದೆ. ದಾವಣಗೆರೆ ಸಿಇಎನ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳಿಬ್ಬರನ್ನು ಬಂಧನ ಮಾಡಿದ್ದಾರೆ. ಹುಬ್ಬಳ್ಳಿ ರೇಲ್ವೆ ಪೊಲೀಸ್ ಠಾಣೆಯ ಪೇದೆ ಮಂಜುನಾಥ, ದಾವಣಗೆರೆ ನಗರದ ನಿಟ್ಟುವಳ್ಳಿ ನಿವಾಸಿ ರಾಜಪ್ಪ ಬಂಧಿತ ಆರೋಪಿಗಳಾಗಿದ್ದಾರೆ.ಮೈಕ್ರೋ ಪೋನ್ ಮೂಲಕ ಕೆಪಿಎಸ್ಸಿ ಪರೀಕ್ಷೆಯಲ್ಲಿ ನಕಲು ನಡೆದಿತ್ತು. ಇವರ ಜಾಲ ರಾಜ್ಯಾದ್ಯಂತ ಹರಡಿದ ಶಂಕೆ