ಶಿವಮೊಗ್ಗ: ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ರುದ್ರೇಗೌಡರಿಗೆ ಬಿಜೆಪಿ ಟಿಕೆಟ್ ನೀಡಿದರೆ ನಾನೇ ಮುಂದೆ ನಿಂತು ಗೆಲ್ಲಿಸುವುದಕ್ಕೆ ಓಡಾಟ ನಡೆಸುತ್ತೇನೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಚಾಮುಂಡೇಶ್ವರಿ ಮೇಲೆ ಆಣೆ ಮಾಡಿ ಹೇಳಲಿ ಪರಮೇಶ್ವರ ನ್ನ ಸೋಲಿಸಿದ್ದ ನಾನು ಅಲ್ಲವೆಂದು ಅಂತ ಸವಾಲು ಹಾಕಿದರು. ರಾಜ್ಯದಲ್ಲಿ ಸರ್ಕಾರದಿಂದ ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗಿದೆ. ಎಪ್ರಿಲ್ 3 ರಂದು ಕಾಗಿನಲೆಯಲ್ಲಿ