ಬೆಂಗಳೂರು: ಉಪ ಚುನಾವಣೆ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ತೆರೆಮರೆಯಲ್ಲಿ ಸದ್ದಿಲ್ಲದೇ ತಯಾರಿಗಳು ನಡೆಯುತ್ತಿವೆ.ಈ ಬಗ್ಗೆ ಹೇಳಿಕೆ ನೀಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬರಲು ಸಹಾಯ ಮಾಡಿದವರ ಋಣ ಸಂದಾಯ ಮಾಡುವುದು ನಮ್ಮ ಮೊದಲ ಆದ್ಯತೆಯಾಗಲಿದೆ ಎಂದಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿರುವ ಈಶ್ವರಪ್ಪ ಸಚಿವ ಸಂಪುಟ ವಿಸ್ತರಣೆ ಸಂದರ್ಭ ರಾಜೀನಾಮೆ ನೀಡಿದವರಿಗೆ ಸಚಿವ ಸ್ಥಾನ ನೀಡುವುದು ಆದ್ಯತೆಯಾಗಬೇಕಿದೆ ಎಂದು ಈಗಾಗಲೇ