ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪಗೆ ತಲೆಯಲ್ಲಿ ಮೆದುಳಿಲ್ಲ. ಅದಕ್ಕೆ ಮನಸ್ಸಿಗೆ ಬಂದಂತೆ ಮಾತನಾಡುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಂಗಾಯುತರ ವಿಚಾರದಲ್ಲಿ ಬೆಂಕಿ ಹಚ್ಚಿರುವುದೇ ನಾನು ಎಂದು ಹೇಳಿಕೆ ನೀಡಿರುವುದನ್ನು ನೋಡಿದಲ್ಲಿ ಅವರಿಗೆ ತಲೆಯಲ್ಲಿ ಮೆದುಳಿಲ್ಲ ಎನ್ನುವುದು ಸಾಬೀತಾಗುತ್ತದೆ ಎಂದು ತಿರುಗೇಟು ನೀಡಿದ್ದಾರೆ. ರಾಜ್ಯ ಸರಕಾರದ ವಿರುದ್ಧ ಫೋನ್ ಕದ್ದಾಲಿಕೆ ವಿಚಾರ ಆರೋಪದಲ್ಲಿ ಸತ್ಯಾಂಶವಿಲ್ಲ. ಬಿಜೆಪಿಯವರೇ ಫೋನ್ ಕದ್ದಾಲಿಕೆ ಮಾಡ್ತಿರೋರು ಎಂದು ಗುಡುಗಿದ್ದಾರೆ.