ಆರ್.ಟಿ ನಗರದಲ್ಲಿರುವ ಸಿಎಂ ಬೊಮ್ಮಾಯಿ ಅವರ ಖಾಸಗಿ ನಿವಾಸಕ್ಕೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ ನೀಡಿದರು. ಈ ವೇಳೆ ಮುಖ್ಯಮಂತ್ರಿಗಳ ಜೊತೆ ಕೆಲಕಾಲ ಮಾತುಕತೆ ನಡೆಸಿದರು. ಶಿವಮೊಗ್ಗ ಪ್ರವಾಸಕ್ಕೆ ಸಿಎಂ ಆಗಮಿಸುತ್ತಿರುವ ಕುರಿತು ಮಾತುಕತೆ ನಡೆಯಿತು. ಇದರ ಜೊತೆಯಲ್ಲಿಯೇ ಸಚಿವ ಸಂಪುಟ ವಿಸ್ತರಣೆ ವಿಷಯದ ಕುರಿತು ಪ್ರಸ್ತಾಪವಾಯಿತು. ಆದಷ್ಟು ಬೇಗ ಸಚಿವ ಸಂಪುಟ ವಿಸ್ತರಣೆ ವಿಷಯದಲ್ಲಿ ನಿರ್ಧಾರವಾಗಲಿದೆ ನಿಮ್ಮನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತದೆ ಎನ್ನುವ ಮುಖ್ಯಮಂತ್ರಿಗಳ ಹೇಳಿಕೆಗೆ ಈಶ್ವರಪ್ಪ ಅಸಹನೆಗೊಂಡರು. ಈ