ಬೆಂಗಳೂರು (ಸೆ 11) : ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾ ಸಂಸ್ಕೃತಿಯನ್ನು ಹುಟ್ಟುಹಾಕುವುದರ ಜೊತೆಗೆ ಇತರೆ ಕ್ರೀಡೆಗಳಿಗೂ ಆ ಸಂಸ್ಕೃತಿಯನ್ನು ಅನುಷ್ಠಾನಕ್ಕೆ ತರಲು ಪ್ರೇರಣೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಯೂನಿಪೋಲ್ ಫ್ಲಡ್ ಲೈಟಿಂಗ್ ಟವರ್ ಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಚಿನ್ನಸ್ವಾಮಿ ಕ್ರಿಕೆಟ್ ಮೈದಾನ ಇಷ್ಟು ಅಚ್ಚುಕಟ್ಟಾಗಿ ಇರುವುದನ್ನು ನೋಡಿ ಬಹಳಷ್ಟು ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಾರೆ ಅಚ್ಚುಕಟ್ಟುತನದ ಸಂಸ್ಕೃತಿ ಬೆಂಗಳೂರಿನಲ್ಲಿ