ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಹೊತ್ತಿಕೊಂಡು ಧಗಧಗನೆ ಉರಿದ ಘಟನೆ ವರದಿಯಾಗಿದೆ. ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿರುವಾಗ ಮಾರನಹಳ್ಳಿ ಬಳಿ ಘಟನೆ ನಡೆದಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದಂತಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಚಾಲಕ ಬಸ್ನ್ನು ರಸ್ತೆ ಬದಿಗೆ ನಿಲ್ಲಿಸಿ ಪ್ರಯಾಣಿಕರಿಗೆ ಕೆಳಗೆ ಇಳಿಯುವಂತೆ ಸೂಚನೆ ನೀಡಿದ್ದಾನೆ ಎನ್ನಲಾಗಿದೆ. ಬಸ್ನಲ್ಲಿದ್ದ ಪ್ರಯಾಣಿಕರು