ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಆಗಿರೋ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹಾರ್ಲೆ ಕೂಡಿಗೆ ಗ್ರಾಮದ ಬಳಿ ನಡೆದಿದೆ. ಬಾಗೆ ಸಮೀಪದ ಕಾಕನಮನೆ ಗ್ರಾಮದ ಯುವಕ ಅಭಿ ಸ್ಥಳದಲ್ಲಿಯೇ ಸಾವನಪ್ಪಿದ್ದಾನೆ. ಹೊಸವರ್ಷ ಪಾರ್ಟಿ ಮುಗಿಸಿ ಅಭಿ ಎಂಬ ಯುವಕ ಮನೆಗೆ ವಾಪಸ್ಸು ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಸಕಲೇಶಪುರದಿಂದ ಹಾನುಬಾಳು ಕಡೆಗೆ ಹೋಗುತ್ತಿದ್ದ ಸಾರಿಗೆ ಬಸ್ ಹಾಗೂ ಕಾರು ನಡುವೆ ಡಿಕ್ಕಿ ಆಗಿ