ಕೇರಳದಿಂದ ಬರುವ ಹಾಗೂ ಹೋಗುವ ಬಸ್ ಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಸ್ಯಾನಿಟೈಸರ್ ಸಿಂಪಡಿಸಲು ಸಚಿವ ರಾಮಲಿಂಗಾರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಅದರಂತೆ ಕ್ರಮಕೈಗೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ.ರಾಜ್ಯದಲ್ಲಿ ಕೋವಿಡ್ ಭೀತಿ ಹಿನ್ನಲೆ ರಾಜ್ಯ ಸಾರಿಗೆ ನಿಗಮದಿಂದ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ.