ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ರಾಜ್ಯ ರಸ್ತೆ ಸಾರಿಗೆ ನಿಗಮ ಪ್ರಯಾಣಿಕರ ಅನುಕೂಲಕ್ಕಾಗಿ ಅ.17 ರಿಂದ 19ರವರೆಗೆ ಬೆಂಗಳೂರಿನಿಂದ ಹೆಚ್ಚುವರಿಯಾಗಿ ರಾಜ್ಯದ ವಿವಿಧ ಭಾಗಗಳಿಗೆ 1300 ರಿಂದ 1500 ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರ್ಗಿ, ಬಳ್ಳಾರಿ, ಕೊಪ್ಪಳ,