ಬಿಜೆಪಿ ಸಂಸದ ಬಿ.ಶ್ರೀರಾಮುಲು ಅವರ ಆಪ್ತ ಹಾಗೂ ಕೂಡ್ಲಿಗಿ ಕ್ಷೇತ್ರದ ಪಕ್ಷೇತರ ಶಾಸಕ ಬಿ.ನಾಗೇಂದ್ರ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಸಾಧ್ಯತೆಯಿದೆ. ಹೊಸಪೇಟೆಯಲ್ಲಿ ಜನವರಿ 29 ರಂದು ನಡೆಯಲಿರುವ ಎಸ್ಟಿ ಸಮಾವೇಶಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಬರಲಿದ್ದು, ಅವರ ಸಮ್ಮುಖದಲ್ಲೇ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ ಎನ್ನಲಾಗಿದೆ. ನಾಗೇಂದ್ರ ಕಾಂಗ್ರೆಸ್ ಸೇರ್ಪಡೆ ಸಂಬಂಧ ಈಗಾಗಲೇ ರಾಹುಲ್ ಗಾಂಧಿ ಅವರು ಒಪ್ಪಿಗೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ತಾಜಾ ಸುದ್ದಿಗಳನ್ನು ಓದಲು