ಶಿವಮೊಗ್ಗ : ಮದುವೆಯಾಗಲು ಕುಜ ದೋಷ ಅಡ್ಡಿಯಾಗಿದ್ದರಿಂದ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.ಆತ್ಮಹತ್ಯೆಗೆ ಶರಣಾದ ಯುವತಿ ಸುಧಾ. ಭದ್ರಾವತಿ ತಾಲೂಕಿನ ಕಲ್ಲಾಪುರ ನಿವಾಸಿಯಾಗಿರುವ ಪೊಲೀಸ್ ಕಾನ್ಸ್ಟೇಬಲ್ ಸುಧಾ ಹಾಗೂ ಭದ್ರಾವತಿ ಅರಣ್ಯ ವಲಯದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಬೆಳಗಾವಿ ಮೂಲದ ಪ್ರವೀಣ್ ಆರು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇವರಿಬ್ಬರ ಪ್ರೀತಿಗೆ ಹೆತ್ತವರ ವಿರೋಧವಿತ್ತು. ಆರಂಭದಲ್ಲಿ ಇವರಿಬ್ಬರ ಪ್ರೀತಿಗೆ ಜಾತಿ ಅಡ್ಡಿಯಾಗಿತ್ತು. ಜಾತಿ ಅಡ್ಡಿಯ ನಡುವೆಯೂ