ಬೆಂಗಳೂರು : ಉಪಚುನಾವಣೆ ಕಾಂಗ್ರೆಸ್ 15 ಸೀಟು ಗೆದ್ದರೆ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದ ಸಿದ್ದರಾಮಯ್ಯ ನವರ ಹೇಳಿಕೆಯ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟ್ವೀಟರ್ ನಲ್ಲಿ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಸಿದ್ದರಾಮಯ್ಯನವರೇ ಯಾರ ಸಹವಾಸದಿಂದ ಯಾರು ಕೆಟ್ಟರು? ಯಾರು ಯಾರಿಗೆ ಕೇಡು ಬಗೆದರು? ಎಂದು ಆತ್ಮವಂಚನೆ ಇಲ್ಲದೇ ಹೇಳುವಿರಾ? ನಮ್ಮ ಸಹವಾಸ ಮಾಡಿ ಎಂದು ಸಿದ್ದರಾಮಯ್ಯ ಅವರನ್ನು ಬೇಡಿದ್ದು ಯಾರು? ಅವರ ಮನೆ