ಚಿಕ್ಕಬಳ್ಳಾಪುರ: ಸಿಎಂ ಸಿದ್ಧರಾಮಯ್ಯ ಅವರು ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯ ಸಮಾವೇಶದಲ್ಲಿ ಪಾಲ್ಗೊಂಡಿದ್ದು, ಹೆಚ್ ಡಿ ಕುಮಾರಸ್ವಾಮಿಯ ವಿರುದ್ಧ ಹೇಳಿಕೆಯನ್ನು ನೀಡಿದ್ದಾರೆ. ಕುಮಾರಸ್ವಾಮಿ ಅವರು ಅವರಪ್ಪನಾಣೆ ಮುಖ್ಯಮಂತ್ರಿ ಆಗಲ್ಲ. ಅವರು ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದಾರೆ. ಆದರೆ ಅವರಿಗೆ ಅನುಭವದ ಕೊರತೆ ಇದೆ. ಅವರು ಸಿಎಂ ಆದ್ರೆ ಎತ್ತಿನಹೊಳೆ ಯೋಜನೆಯನ್ನು ನಿಲ್ಲಿಸುವುದಾಗಿ ಹೇಳಿದ್ದರು. ಕುಮಾರಸ್ವಾಮಿಯ ವರಿಗೆ ಚಿಕ್ಕಬಳ್ಳಾಪುರ ಜನರನ್ನು ಕಂಡರೆ ಹೊಟ್ಟೆಕಿಚ್ಚು. ಕೇವಲ ರಾಜಕಾರಣ ಮಾಡಲು ಹೇಳಿಕೆ ನೀಡಬಾರದು. ಕುಮಾರಸ್ವಾಮಿ ಹಾಗು