ಮಂಡ್ಯ : ಇವರ ಕುಟುಂಬದವರು ಎಲ್ಲಾ ಕಡೆ ಸ್ಪರ್ಧೆ ಮಾಡುತ್ತಿದ್ದಾರೆ. ಅವರೆಲ್ಲಾ ದ್ವೇಷದಿಂದ ಸ್ಪರ್ಧೆ ಮಾಡುತ್ತಿದ್ದಾರಾ? ಅಥವಾ ವಿರೋಧ ಪಕ್ಷದವರ ಮೇಲೆ ಪ್ರೀತಿಯಿದ್ದು ಅವರು ಗೆಲ್ಲಲಿ ಎಂದು ನಿಂತುಕೊಂಡಿದ್ದಾರಾ ಎಂದು ಪ್ರಶ್ನಿಸುವ ಮೂಲಕ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಕುಮಾರಸ್ವಾಮಿ ವಿರುದ್ಧ ಕಿಡಿ ಕಾರಿದ್ದಾರೆ. ನಮ್ಮ ಕುಟುಂಬ ಸುಮಲತಾ ಅವರಿಗೆ ಏನು ಅನ್ಯಾಯ ಮಾಡಿದೆ ಎಂಬ ಕುಮಾರಸ್ವಾಮಿ ಹೇಳಿಕೆ ಕುರಿತು ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಚುನಾವಣೆಯಲ್ಲಿ ಒಬ್ಬರ