ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬೆಳಗ್ಗೆ 7 ಗಂಟೆಗೆ ಡಿಸ್ಚಾರ್ಜ್ ಆದ ಕುಮಾರಸ್ವಾಮಿ ಅಪೋಲೋ ಆಸ್ಪತ್ರೆಯ ಆವರಣದಲ್ಲಿರುವ ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಜೆ.ಪಿ. ನಗರದ ನಿವಾಸಕ್ಕೆ ತೆರಳಿದ್ದಾರೆ. ಸೆ.21ರಂದು ಕುಮಾರಸ್ವಾಮಿ ಅಪೋಲೋ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಸೆ.23ರಂದು ಟಿಶ್ಯೂ ವಾಲ್ವ್ ಬದಲಾವಣೆಯ ಶಸ್ತ್ರಚಿಕಿತ್ಸೆ ನಡೆದಿತ್ತು. 12 ದಿನಗಳ ಕಾಲ ಚಿಕಿತ್ಸೆ ಪಡೆದ ಕುಮಾರಸ್ವಾಮಿ ಸಂಪೂರ್ಣ ಚೇತರಿಸಿಕೊಂಡು ಮನೆಗೆ ತೆರಳಿದ್ದಾರೆ.ನಿನ್ನೆ ಆಸ್ಪತ್ರೆಯಲ್ಲೇ ಸುದ್ದಿಗೋಷ್ಠಿ