ಮಾಜಿ ಪ್ರಧಾನಿ, ಜೆಡಿಎಸ್ ಪಕ್ಷದ ವರಿಷ್ಠ ಹೆಚ್.ಡಿ. ದೇವೇಗೌಡರು ಭೀಷ್ಮಾಚಾರ್ಯ ಇದ್ದಂತೆ. ಅವರಿಗೆ ಸಾವು ಅನ್ನೋದುಅವರು ಬಯಸಿದಾಗಲೇ ಬರುತ್ತದೆಯೇ ಹೊರತು, ಯಾರೋ ಏನೋ ಹೇಳಿದಾಗ ಬರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮಾರ್ಮಿಕವಾಗಿ ಹೇಳಿದರು. ಈ ಕುರಿತು ಜೆಡಿಎಸ್ ಕಚೇರಿಯಲ್ಲಿ ಸುಧ್ದಿಗೋಷ್ಠಿಯಲ್ಲಿ ಮಾತನಾಡಿ ಸಿದ್ದರಾಮಯ್ಯನವರನ್ನು ಬೆಳೆಸಿದ್ದು ಕಾಂಗ್ರೆಸ್ ಕಾರ್ಯಕರ್ತರಲ್ಲ. ಇಷ್ಟು ದೊಡ್ಡಮಟ್ಟಕ್ಕೆ ಬೆಳೆಯಲು ಜೆಡಿಎಸ್ ಕಾರ್ಯಕರ್ತರು ಕಾರಣ. ಅದನ್ನು ಅವರು ಅರ್ಥಮಾಡಿಕೊಳ್ಳಬೇಕು. ಅಲ್ಲದೇ, ಸಿದ್ದರಾಮಯ್ಯನವರ ಹುಟ್ಟುಹಬ್ಬದ ಕಾರ್ಯಕ್ರಮ ಕೆಡಿಸಬೇಕೆಂದು