ಬಿಜೆಪಿ ಸರ್ಕಾರದ ಅವಧಿಯಲ್ಲಿ ಶೇ 10ರಷ್ಟು ಕಮಿಷನ್ ಇತ್ತು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಇನ್ನೂ ಹೆಚ್ಚಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಆರೋಪಿಸಿದ್ದಾರೆ. ಯಲಹಂಕದ ಬಳಿ ಫೆಬ್ರುವರಿ 17ರಂದು ನಡೆಯುವ ವಿಕಾಸ ಪರ್ವ ಯಾತ್ರೆ ವೇದಿಕೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ನಂತರ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಬಿಜೆಪಿ ಅವಧಿಯಲ್ಲಿ ಪಡೆಯುತ್ತಿದ್ದ ಕಮಿಷನ್ ಮಾಹಿತಿ ಮಾತ್ರ ನೀಡಲಾಗಿದೆ. ಕಾಂಗ್ರೆಸ್ ಅವಧಿಯಲ್ಲಿ ಈ ಕಮಿಷನ್ ಹೆಚ್ಚಾಗಿರುವ ಮಾಹಿತಿ