ಚುನಾವಣೆ ಫಲಿತಾಂಶ ಬಂದಿದೆ. ನನಗೆ ಜನರು 123 ಕ್ಷೇತ್ರ ಕೊಡಲಿಲ್ಲ. ಈಗ ಪಂಚರತ್ನ ಜಾರಿ ಹಾಗೂ ಪಕ್ಷ ವಿಸರ್ಜನೆ ಪ್ರಶ್ನೆ ಎಲ್ಲಿ? ಸಾಮಾನ್ಯ ಜ್ಞಾನವೇ ಇಲ್ಲದ ಸಚಿವರಿಗೆ ಈ ಪರಿ ಅಜ್ಞಾನವಿದೆ ಎಂದು ನಾನಂತೂ ಎಣಿಸಿರಲಿಲ್ಲ. ಇಷ್ಟು ಅವಿವೇಕವುಳ್ಳ ಇವರ ಮುಂದಿನ ಆಡಳಿತ ಈಗಲೇ ಆತಂಕವಾಗುತ್ತಿದೆ ಎಂದು ಚಾಟಿ ಬೀಸಿದ್ದಾರೆ. ಕೆಲವರ ವಿವೇಕರಹಿತ ಹೇಳಿಕೆಗಳಿಗೆ ಉತ್ತರಿಸುವುದು ಬೇಡ ಭಾವಿಸಿದ್ದೆ. ನಾನು ಸೋತ ನೋವಿನಲ್ಲಿದ್ದೇನೆ. ಕಾಂಗ್ರೆಸ್ ನವರು ಗೆದ್ದ ಅಹಂನಲ್ಲಿ ಇದ್ದಾರೆ.