ಮಂಗಳೂರು : ತನ್ನ ಮಗ ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗಬೇಕೆಂದು ಮಾಜಿ ಪ್ರಧಾನಿ, ಮಣ್ಣಿನ ಮಗ ಕಾಲಿಗೆ ಚಕ್ರ ಕಟ್ಟಿ ತಿರುಗಾಡುತ್ತಿದ್ದಾರೆ. ತನ್ನ ಇಳಿ ವಯಸ್ಸಿನಲ್ಲೂ ಆರೋಗ್ಯವನ್ನು ಲೆಕ್ಕಿಸದೆ ಮಗನಿಗಾಗಿ ಶ್ರಮಿಸುತ್ತಿದ್ದಾರೆ. ಇದರ ಜೊತೆಗೆ ತುಳುನಾಡಿನ ದೈವ-ದೇವರ ಮೊರೆ ಹೋದ ಮಾಜಿ ಪ್ರಧಾನಿ ಹರಕೆಯನ್ನೂ ಹೊತ್ತಿದ್ದಾರೆ.ರಾಜ್ಯದಲ್ಲಿ ಚುನಾಚಣಾ ಕಾವು ಹೆಚ್ಚಾಗುತ್ತಿದ್ದು ಯಾರು ಶಾಸಕರಾಗುತ್ತಾರೆ, ಯಾವ ಪಕ್ಷಕ್ಕೆ ಬಹುಮತ ಬರುತ್ತೆ ಅನ್ನೋ ಲೆಕ್ಕಾಚಾರ ನಡೆಯುತ್ತಿದೆ. ಆದರೆ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ