ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಅವರ ಪುತ್ರ ಕೆಂಡಾಮಂಡಲರಾಗಿದ್ದಾರೆ.ಜಿಂದಾಲ್ ಕಂಪನಿಯಿಂದ ಬಿ.ಎಸ್.ಯಡಿಯೂರಪ್ಪ 20 ಕೋಟಿ ರೂ. ಗಳನ್ನು ಚೆಕ್ ಮೂಲಕ ಪಡೆದುಕೊಂಡಿದ್ದರು. ಹೀಗಂತ ಹೆಚ್.ಡಿ.ಕುಮಾರಸ್ವಾಮಿ ಮಾಡಿರುವ ಆರೋಪಕ್ಕೆ ಬಿ.ಎಸ್.ವೈ ಹಾಗೂ ಅವರ ಪುತ್ರ ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ಮುಖ್ಯಮಂತ್ರಿ ಸ್ಥಾನದಲ್ಲಿರುವ ಕುಮಾರಸ್ವಾಮಿ ಈ ರೀತಿ ಹೊಣಗೇಡಿತನದ ಮಾತನಾಡುವುದು ಸರಿಯಲ್ಲ.ಸಿಬಿಐ ನ್ಯಾಯಾಲಯ ನನ್ನನ್ನು ಎಲ್ಲ ಆರೋಪಗಳಿಂದ ಖುಲಾಸೆಗೊಳಿಸಿದೆ. ನ್ಯಾಯಾಲಯದ ತೀರ್ಪನ್ನು ಪ್ರಶ್ನೆ ಮಾಡುವಂತೆ ಹಗುರವಾಗಿ ಮಾತನಾಡಬೇಡಿ. ಹೀಗಂತ ಬಿ.ಎಸ್.ಯಡಿಯೂರಪ್ಪ