ಖಾಸಗಿ ಆಸ್ಪತ್ರೆಗಳ ವೈದ್ಯರ ವಿರುದ್ಧ ಮನಬಂದಂತೆ ಹೇಳಿಕೆ ನೀಡುವ ಸಚಿವ ರಮೇಶ್ ಕುಮಾರ್ ವೈದ್ಯರನ್ನು ತಮ್ಮ ಮನೆಯ ಗುಲಾಮರು ಅಂದುಕೊಡಿದ್ದಾರಾ? ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರಿ ಆಸ್ಪತ್ರೆಯಲ್ಲಿ ಎಲ್ಲಿ ಒಳ್ಳೆಯ ಚಿಕಿತ್ಸೆ ದೊರೆಯುತ್ತದೆ. ಖಾಸಗಿ ಆಸ್ಪತ್ರೆಗಳ ಬದಲಿಗೆ ಸರಕಾರಿ ಆಸ್ಪತ್ರೆಗಳನ್ನು ಅಭಿವೃದ್ಧಿಪಡಿಸಿದರೆ ಜನತೆ ಯಾಕೆ ಖಾಸಗಿ ಆಸ್ಪತ್ರೆಗೆ ಹೋಗ್ತಾರೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರಕ್ಕೆ ಬೆಂಬಲ ಸೂಚಿಸಿದ