ತೀವ್ರ ವಾದ ವಿವಾದಕ್ಕೆ ಕಾರಣವಾಗಿದ್ದರ ಜತೆಗೆ ಸಮ್ಮಿಶ್ರ ಸರಕಾರಕ್ಕೆ ಕಂಟಕವಾದಂತಿದ್ದ ಪಿ ಎಲ್ ಡಿ ಬ್ಯಾಂಕ್ ಚುನಾವಣೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳು ನಿರೀಕ್ಷೆಯಂತೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಣದ ಪಾಲಾಗಿವೆ. ಇದರಿಂದ ಜಾರಕಿಹೊಳಿ ಬ್ರದರ್ಸ್ ಗೆ ಭಾರಿ ಮುಖಭಂಗವಾದಂತಾಗಿದೆ.ಬೆಳಗಾವಿ ಪಿಎಲ್ ಡಿ ಬ್ಯಾಂಕಿಗೆ ನೂತನ ಅಧ್ಯಕ್ಷರಾಗಿ ಮಹದೇವ್ ಪಾಟೀಲ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷ ಸ್ಥಾನವೂ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಣಕ್ಕೆ ಒಲಿದಿದೆ. ಆ ಮೂಲಕ ಸಚಿವ ಜಾರಕಿಹೊಳಿ ಬಣಕ್ಕೆ ಭಾರೀ