ಬೆಳಗಾವಿ : ಬೆಳಗಾವಿಯಲ್ಲಿ ಬಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಇಡೀ ಗ್ರಾಮವೇ ಪ್ರವಾಹದಿಂದ ಕೊಚ್ಚಿಹೋಗಿ ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನಲೆಯಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿ ಸಂತ್ರಸ್ತರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಬೆಳಗಾವಿಯ ಚಂದನಹೊಸೂರ ಗ್ರಾಮಕ್ಕೆ ಭೇಟಿ ನೀಡಿದ್ದ ಶಾಸಕಿ, ಪ್ರವಾಹಕ್ಕೆ ಮನೆಯನ್ನು ಕಳೆದುಕೊಂಡ ಗ್ರಾಮದ ಮಹಿಳೆಯೊಬ್ಬರಿಗೆ ಸಾಂತ್ವನ ಹೇಳಿದ್ದು, ಇದಕ್ಕೆ ಸಂಬಂಧಪಟ್ಟ ಫೋಟೋಗಳನ್ನ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿ ನೆರೆ