ಬೆಂಗಳೂರು : ಕೊಪ್ಪಳ ಜಿಲ್ಲೆಯ ಕಿಷ್ಕಿಂಧೆಯ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ ಯೋಜನೆಗೆ ಅಗತ್ಯ ಇರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಒಂದು ತಿಂಗಳಲ್ಲಿ ಪೂರ್ಣಗೊಳಿಸಿ ಕಾಮಗಾರಿ ಕೆಲಸವನ್ನು ಪ್ರಾರಂಭಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಾಕೀತು ಮಾಡಿದ್ದಾರೆ. ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ ಯೋಜನೆ ಕುರಿತು ಸಭೆ ನಡೆಸಿ ಈ ಸೂಚನೆ ನೀಡಿದರು. ಯೋಜನೆಗಾಗಿ ಸುಮಾರು 60 ಎಕರೆ ಭೂಮಿ ಅಗತ್ಯ ಇದೆ. ಇದರಲ್ಲಿ 58