ಬಿಎಸ್ವೈ ಮೇಲಿನ ಭೂಹಗರಣ ಪ್ರಕರಣಕ್ಕೆ ಟ್ವಿಸ್ಟ್ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭೂಸ್ವಾಧೀನಾಧಿಕಾರಿ ಪ್ರಕರಣದಲ್ಲಿ ಭಾಗಿಯಾಗಿದ್ದರಿಂದ ತಪ್ಪಿಸಿಕೊಳ್ಳಲು ಇಂತಹ ತಂತ್ರ ನಡೆಸಿದ್ದಾರೆ ಎಂದು ಹೇಳಿದ್ದಾರೆ. ಭೂಸ್ವಾಧೀನಾಧಿಕಾರಿ ಬಸವರಾಜೇಂದ್ರ ಪ್ರಕರಣದಿಂದ ತಪ್ಪಿಸಿಕೊಳ್ಳಲು ಇಂತಹ ಹೇಳಿಕೆ ನೀಡಿದ್ದಾರೆ. ಎಸಿಬಿ ಅಧಿಕಾರಿಗಳು ಒತ್ತಾಯಪೂರ್ವಕವಾಗಿ ತಮ್ಮ ಹೇಳಿಕೆ ಪಡೆದಿದ್ದಾರೆ ಎಂದು ಆರೋಪಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಎಸಿಬಿ ಅಧಿಕಾರಿಗಳಾದ ಬಾಲರಾಜ್ ಮತ್ತು ಅಂಥೋಣಿ, ಬಸವರಾಜೇಂದ್ರ ಮೇಲೆ ಯಾವುದೇ ಒತ್ತಡ ಹೇರಿಲ್ಲ. ಪ್ರಕರಣದಿಂದ ಬಚಾವ್