ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಳಚೆ ಗ್ರಾಮದಲ್ಲಿ ಭೂ ಕುಸಿತಗೊಂಡಿದೆ. ಕಳೆದ ವರ್ಷ ಜುಲೈನಲ್ಲಿ ಭೂಕುಸಿತಗೊಂಡು ಕಳಚೆ ಗ್ರಾಮದಲ್ಲಿ 50ಕ್ಕೂ ಹೆಚ್ಚು ಮನೆಗಳು ಹಾನಿಯಾಗಿತ್ತು ಇದೀಗ ಮತ್ತೆ ಗುಡ್ಡ ಕುಸಿತವಾಗಿ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.ಈ ಹಿಂದೆ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮರುದಿನವೇ ಈ ಗ್ರಾಮಕ್ಕೆ ಭೇಟಿ ನೀಡಿದ್ದರು. ಇಡೀ ಗ್ರಾಮ ಸ್ಥಳಾಂತರಿಸಲು ಅಧಿಕಾರಿಗಳಿಗೆ ಆದೇಶಿಸಿದ್ದರು. ಆದರೇ ಈ ಗ್ರಾಮದ ಜನರನ್ನು ಇದುವರೆಗೂ