ಬೆಂಗಳೂರು ಹೊರವಲಯದ ಪ್ರವಾಸಿತಾಣವಾದ ನಂದಿಬೆಟ್ಟದಲ್ಲಿ ಮತ್ತೊಮ್ಮೆ ಭೂಕುಸಿತದ ವರದಿಯಾಗಿದ್ದು, ತಾತ್ಕಾಲಿಕವಾಗಿ ನಿರ್ಮಿಸಿದ್ದ ರಸ್ತೆ ಕೂಡ ಕುಸಿದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಬೆಟ್ಟದ ಬಳಿ ಭೂ ಕುಸಿತದ ಹಿನ್ನೆಲೆಯಲ್ಲಿ ತಾತ್ಕಾಲಿಕ ರಸ್ತೆ ನಿರ್ಮಿಸಲಾಗಿತ್ತು. ನಿನ್ನೆ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ತಾತ್ಕಾಲಿಕ ರಸ್ತೆಯೂ ಕುಸಿದಿದೆ. ತಾತ್ಕಾಲಿಕ ರಸ್ತೆ ಕುಸಿದ ಪರಿಣಾಮ ವಾಹನ ಸಂಚಾರವನ್ನು ಸಂಪೂರ್ಣ ನಿಷೇಧಿಸಲಾಗಿದ್ದು, ಹಿಟಾಚಿ ಯಂತ್ರದ ಮಾಲಕ ಮಣ್ಣು ತೆರವು ಕಾರ್ಯಾಚರಣೆ ನಡೆದಿದೆ. ಶಾಶ್ವತ ರಸ್ತೆ ನಿರ್ಮಾಣ ಕಾಮಗಾರಿಗೆ 2