ಪಡಿತರ ಚೀಟಿದಾರರಿಗೆ ಹಣದ ಬದಲು ಅಕ್ಕಿ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ನ್ಯಾಯಬೆಲೆ ಅಂಗಡಿ ಮಾಲೀಕರು ರಾಜ್ಯಾದ್ಯಂತ ಪಡಿತರ ಎತ್ತುವಳಿ ಸ್ಥಗಿತಗೊಳಿಸಿರುವ ಹಿನ್ನೆಲೆಯಲ್ಲಿ ಪ್ರಸಕ್ತ ತಿಂಗಳು ಪಡಿತರ ಆಹಾರ ಹಂಚಿಕೆಯಲ್ಲಿ ವಿಳಂಬವಾಗುವ ಸಾಧ್ಯತೆ ಇದೆ.