ನಾಡಿನೆಲ್ಲೆಡೆ ಇಂದಿನಿಂದ ಸಂಕ್ರಾಂತಿ ಹಬ್ಬದ ಸಡಗರ ಮನೆಮಾಡಿದೆ.ದೇವರ ಉತ್ಸವ, ಮನೆಮನೆಗಳಲ್ಲಿ ವಿಶೇಷ ಪೂಜೆ, ನೆರವೇರಿಸಿ ಸಂಭ್ರಮ,ಸಡಗರದಿಂದ ಹಬ್ಬ ಆಚರಿಸುತ್ತಾರೆ. ಅದೇ ರೀತಿ ನಗರದ ಹೊರ ಹೊಲಯದ ಸೋಂಪುರ ಬಳಿಯ ಬಸವೇಶ್ವರ ದೇವಸ್ಥಾನದಲ್ಲಿ ಅದ್ದೂರಿ ಕಡಲೇಕಾಯಿ ಪರಿಷೆ ಹಾಗೂ ಬಸವೇಶ್ವರ ರಥೋತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ಕೆಂಗೇರಿ ಸಮೀಪದ ನೈಸ್ ಕಾರಿಡಾರ್ ಸರ್ಕಲ್ ಬಳಿ ಚನ್ನವೀರಯ್ಯನಪಾಳ್ಯದ ಚೋಳರ ಕಾಲದ ಇತಿಹಾಸ ಪ್ರಸಿದ್ಧ ನಂದಿಬಸವೇಶ್ವರ ದೇವಸ್ಥಾನದ ಅವರಣದಲ್ಲಿ ಸಂಕ್ರಾಂತಿ ಹಬ್ಬದಂದು ಕಡಲೇಕಾಯಿ ಪರಿಷೆ ನಡೆಯುತ್ತಿದೆ.