ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ತಮ್ಮ ಪುತ್ರಿಯ ವಿವಾಹವನ್ನು ಇಷ್ಟು ಅದ್ಧೂರಿಯಾಗಿ ಮಾಡುತ್ತಿರುವುದು ಸರಿಯಲ್ಲ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಸಾಕಷ್ಟು ಕಷ್ಟದ ನಂತರ ತಮ್ಮ ಮಗಳ ವಿವಾಹ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ನಾನು ಪ್ರತಿಕ್ರಿಯೆ ನೀಡುವುದು ಉತ್ತಮವಲ್ಲ. ಮದುವೆ ಅವರವರ ವೈಯಕ್ತಿಕ ವಿಚಾರ ಎಂದು ಹೇಳಿದರು. ಶಾಸಕನಾಗಿದ್ದಾಗ ಅದ್ಧೂರಿ