ಏಕವಚನದಲ್ಲಿ ಸಂಸದ ಹಾಗೂ ಶಾಸಕ ಕಿತ್ತಾಡಿಕೊಂಡ ಘಟನೆ ನಡೆದಿದೆ. ದಾವಣಗೆರೆ ಸಂಸದ ಸಿದ್ದೇಶ್ವರ ಹಾಗೂ ಶಾಸಕ ಮಾಡಾಳು ವಿರುಪಾಕ್ಷಪ್ಪ ಪರಸ್ಪರ ಬೈದಾಡಿಕೊಂಡು ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದಾರೆ ಎನ್ನಲಾಗಿದೆ.ದಾವಣಗೆರೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಕೋವಿಡ್ -19 ಸೋಂಕಿನ ಬಗ್ಗೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಹಾಗೂ ವೈದ್ಯಕೀಯ ಸಚಿವ ಡಾ.ಸುಧಾಕರ್ ಸಮ್ಮುಖದಲ್ಲಿ ಏ ಏನೋ ಮಾತಾಡ್ತೀಯಾ ನೀನು ಎಂದ ಸಂಸದ, ಏ ಕೂತುಕೊಳ್ಳೊ ನೀನು, ನಿಂದೇನೋ