ದೇವಬಾಗದ ವ್ಯಾಪ್ತಿಯಲ್ಲಿ ಕಡಲ ಕೊರೆತ ಸಂಭವಿಸಿದೆ. ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಚಿತ್ತಾಕುಲ ಪಂಚಾಯತಿ ವ್ಯಾಪ್ತಿಯ ದೇವಬಾಗದ ಕಡಲ ಕೊರೆತ ಪ್ರದೇಶಕ್ಕೆ ಶಾಸಕಿ ರೂಪಾಲಿ ನಾಯ್ಕ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಸ್ಥಳಿಯರೊಂದಿಗೆ ಮಾತನಾಡಿದ ಶಾಸಕಿ, ಕಾರವಾರ-ಅಂಕೋಲಾ ವ್ಯಾಪ್ತಿಯಲ್ಲಿ ಕಡಲ ಕೊರೆತ ತಡೆಗೆ 17 ಕೋಟಿ ರೂ. ಮಂಜೂರಾಗಿದೆ. ಪ್ರಕ್ರಿಯೆ ಟೆಂಡರ್ ಹಂತದಲ್ಲಿದೆ. ಮಳೆಗಾಲದ ನಂತರ ಕಾಮಗಾರಿ ಆರಂಭಗೊಳ್ಳಲಿದೆ.ಅಲ್ಲಿಯವರೆಗೆ ತಾತ್ಕಾಲಿಕವಾಗಿ ಕಲ್ಲುಗಳನ್ನು ಹಾಕಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು