ಅಹಮದಾಬಾದ್, ವಡಗಾಮ್ ಕ್ಷೇತ್ರದ ಶಾಸಕ ಮತ್ತು ದಲಿಕ ನಾಯಕ ಜಿಗ್ನೇಶ್ ಮೆವಾನಿ ಅವರನ್ನು ಅಸ್ಸಾಂ ಪೊಲೀಸರು ಬುಧವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ. ಗೋಡ್ಸೆಯನ್ನು ದೇವರಾಗಿ ಕಾಣುವ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ನಲ್ಲಿ ಕೋಮುಗಳ ನಡುವಿನ ಸಂಘರ್ಷದ ವಿರುದ್ಧ ಮಾತನಾಡಬೇಕು, ಶಾಂತಿ ಮತ್ತು ಸೌಹಾರ್ದತೆಗೆ ಕರೆ ನೀಡಬೇಕು ಎಂಬರ್ಥದ ಟ್ವೀಟ್ಗಳನ್ನು ಜಿಗ್ನೇಶ್ ಮಾಡಿದ್ದಾರೆ. ಆ ಬಗ್ಗೆ ದಾಖಲಾಗಿರುವ ದೂರಿನ ಅನ್ವಯ ಪೊಲೀಸರು ಕ್ರಮಕೈಗೊಂಡಿದ್ದಾರೆ. ಕಾಂಗ್ರೆಸ್ ಮುಖಂಡರು ಹಾಗೂ ಬೆಂಬಲಿಗರು ಅಹಮದಾಬಾದ್