ಶಿವಮೊಗ್ಗ-ಹೊಸನಗರ ಮುಖ್ಯ ರಸ್ತೆಯಲ್ಲಿರುವ ಕೋಡೂರು ಸರ್ಕಾರಿ ಶಾಲೆ ಮೇಲ್ಚಾವಣಿ ಶಿಥಿಲವಾಗಿದ್ದು, ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣವಾಗಿದೆ. ಮಳೆಯಿಂದ ರಕ್ಷಣೆ ಪಡೆಯಲು ವಿದ್ಯಾರ್ಥಿಗಳು ಶಾಲಾ ತರಗತಿ ಕೊಠಡಿಯಲ್ಲಿ ಛತ್ರಿ ಹಿಡಿದು ಪಾಠ ಪ್ರವಚನ ಕೇಳುವ ಸ್ಥಿತಿ ಎದುರಾಗಿದೆ.