ಕರ್ನಾಟಕದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ 1ರಿಂದ 12ನೇ ತರಗತಿ ವರೆಗಿನ ಮಕ್ಕಳಿಗೆ ಪ್ರಥಮ ಭಾಷೆಯಾಗಿ ಕನ್ನಡ ಭಾಷಾ ಕಲಿಕೆಯನ್ನು ಕಡ್ಡಾಯಗೊಳಿಸಬೇಕು. ದ್ವಿತೀಯ ಭಾಷೆಯಾಗಿ ಇಂಗ್ಲಿಷ್ ಮತ್ತು ತೃತೀಯ ಭಾಷೆಯಾಗಿ ಭಾರತದ ಯಾವುದಾದರೊಂದು ಭಾಷೆಯನ್ನು ಕಲಿಸಬೇಕು. ಈ ವೇಳೆ 3ನೇ ಭಾಷೆಯಾಗಿ ಸಂಸ್ಕೃತಕ್ಕೆ ಆದ್ಯತೆ ನೀಡಬೇಕು. ರಾಷ್ಟ್ರೀಯ ಶಿಕ್ಷಣ ನೀತಿ 2020ರಲ್ಲಿ ಈ ಅಂಶಗಳು ಅವಕಾಶ ಪಡೆಯಬೇಕು’ ಎಂದು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ. ಕೇಂದ್ರ ಸರ್ಕಾರದ ಸೂಚನೆ