ಕೇಂದ್ರ ಸರ್ಕಾರದ ಕಾರ್ಯ ವೈಖರಿ ವಿರುದ್ಧ ಗರಂ ಆಗಿರೋ ಎಡಪಕ್ಷಗಳು ರೋಡಿಗಿಳಿದಿವೆ.ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಎಡಪಕ್ಷಗಳು ದೇಶದಾದ್ಯಂತ ಹಮ್ಮಿಕೊಂಡಿರುವ ಪ್ರತಿಭಟನೆ ಹಿನ್ನಲೆಯಲ್ಲಿ ಹುಬ್ಬಳ್ಳಿ ನಗರದಲ್ಲಿಯೂ ಎಡಪಕ್ಷಗಳು ಪ್ರತಿಭಟನೆ ನಡೆಸಿವೆ. ಸಂಗೊಳ್ಳಿ ರಾಯಣ್ಣ ವೃತ್ತದಿಂದ ತಹಸೀಲ್ದಾರ್ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ಮಾಡಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರ ತೆಗೆದುಕೊಂಡಿರುವ ನೀತಿಗಳನ್ನು ಕೂಡಲೇ ಕೈಬಿಡಬೇಕೆಂದು ಆಗ್ರಹಿಸಿ ಧಿಕ್ಕಾರ ಕೂಗಿದ್ರು. ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ತಲೆದೊರುತ್ತಿದ್ದು, ಈ ಸಂದರ್ಭದಲ್ಲಿ ಯಾವುದೇ ಸೂಕ್ತ ಕ್ರಮವನ್ನು ಕೇಂದ್ರ