ಬೆಂಗಳೂರು : ರಾಜ್ಯದೆಲ್ಲೆಡೆ ಸುರಿಯುತ್ತಿರುವ ಮಹಾಮಳೆಗೆ ಕೆಲವಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಪ್ರವಾಹ ಉಂಟಾಗಿರುವ ಸ್ಥಳಗಳಿಗೆ ಭೇಟಿ ನೀಡಿದ್ದಾರೆ. ಇಂದು ನೆರೆ ಪೀಡಿತ ಮುಧೋಳ, ಜಮಖಂಡಿ, ಕೂಡಲಸಂಗಮ ಹಾಗೂ ಬಾದಾಮಿಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಿರುವ ಸಿಎಂ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆಯಿಂದಾಗಿ ರಾಜ್ಯದಲ್ಲಿ ವಿಪರೀತ ನಷ್ಟ ಉಂಟಾಗಿದೆ. ಕೇಂದ್ರ ಸರ್ಕಾರ ಎಲ್ಲಾ ರೀತಿಯ ಸಹಾಯ ಮಾಡುವ ಭರವಸೆ