ಬೆಳಗಾವಿ ನಗರದ ಗಾಲ್ಫ್ ಮೈದಾನದಲ್ಲಿ ಕಾಣಿಸಿಕೊಂಡಿರುವ ಚಿರತೆಯನ್ನು ಸೆರೆ ಹಿಡಿಯುವ ಕಾರ್ಯಾಚರಣೆ ಇಂದೂ ಸಹ ಮುಂದುವರಿದಿದೆ. ಅರಣ್ಯ ಇಲಾಖೆ ಮತ್ತು ಪೊಲೀಸ್ ಸಿಬ್ಬಂದಿ ಜಂಟಿ ಕಾರ್ಯಾಚರಣೆ ಆರಂಭಿಸಿದ್ದು, ಹೆಚ್ಚುವರಿಯಾಗಿ ಇಬ್ಬರು ಶೂಟರ್ಗಳೂ ಪಾಲ್ಗೊಂಡಿದ್ದಾರೆ.