ಬೆಂಗಳೂರಿನ ಯಲಹಂಕ ರೈಲ್ವೆಗಾಲಿ ಮತ್ತು ಅಚ್ಚು ಕಾರ್ಖಾನೆ ಆವರಣದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಚಿರತೆ ಸಂಚರಿಸ್ತಿರೋ ದೃಶ್ಯಗಲು ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅದನ್ನ ಕಂಡ ಕಾರ್ಖಾನೆಯ ಸಿಬ್ಬಂದಿಯಲ್ಲಿ ಆತಂಕ ಮನೆ ಮಾಡಿದ್ದು, ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಯಲಹಂಕ ವಲಯ ಅರಣ್ಯಾಧಿಕಾರಿಗಳು ಚಿರತೆ ಹಿಡಿಯಲು ಬೋನಿಟ್ಟು ಕಾರ್ಯಚರಣೆ ನಡೆಸ್ತಿದ್ದಾರೆ. ಕಾರ್ಖಾನೆಯ ಒಳಗೆ ಯಾವುದೇ ಸಿಬ್ಬಂದಿಯನ್ನು ಬಿಡದೆ ಪ್ರವೇಶಕ್ಕೆ ನಿರ್ಬಂಧ ಹೇರಿರುವ ರೈಲ್ವೆ ಅಧಿಕಾರಿಗಳು ಹಾಗೂ ಅರಣ್ಯಾಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಚಿರತೆಯನ್ನ ಜೀವಂತವಾಗಿ