ಕಾಡಿನಲ್ಲಿರಬೇಕಾದ ಚಿರತೆಯೊಂದು ಮನೆಯೊಂದಕ್ಕೆ ನುಗ್ಗಿದ ಪರಿಣಾಮ ಭಾರೀ ಅನಾಹುತ ಆಗಿರುವ ಘಟನೆ ನಡೆದಿದೆ.ಆಹಾರಕ್ಕಾಗಿ ಗ್ರಾಮದೊಳಗೆ ನುಗ್ಗಿರುವ ಚಿರತೆಯೊಂದು ಜನರ ಮೇಲೆ ದಾಳಿ ನಡೆಸಿದೆ. ಚಿರತೆ ದಾಳಿ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹೊಳೆ ಸಿರಿಗೆರೆ ಗ್ರಾಮದಲ್ಲಿ ನಡೆದಿದೆ.ಆಹಾರಕ್ಕಾಗಿ ಗ್ರಾಮದೊಳಗೆ ಚಿರತೆ ನುಗ್ಗಿದ್ದು, ಮನೆಯೊಂದರಲ್ಲಿ ಅವಿತು ಕುಳಿತಿದೆ. ಈ ವೇಳೆ ಮನೆಯಿಂದ ತಪ್ಪಿಸಿಕೊಂಡು ಹೋಗುವಾಗ ಮೂವರ ಮೇಲೆ ದಾಳಿ ನಡೆಸಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಗಾಯಗೊಂಡವರನ್ನು ಹರಿಹರ