ಚಿಕ್ಕಬಳ್ಳಾಪುರ : ಎಸ್.ಎಂ ಕೃಷ್ಣ ಅವರ ನಂತರ ರಾಜ್ಯದಲ್ಲಿ ಒಕ್ಕಲಿಗರಿಗೆ ಮುಖ್ಯಮಂತ್ರಿಯಾಗುವ ಅವಕಾಶ ಸಿಕ್ಕಿಲ್ಲ. ಹಾಗಾಗಿ ಒಕ್ಕಲಿಗರಿಗೆ ಮುಖ್ಯಮಂತ್ರಿ ಸ್ಥಾನ ನೀಡಿದರೆ ಉತ್ತಮ ಎಂದು ಮಾಜಿ ಸಚಿವ ಡಾ.ಕೆ ಸುಧಾಕರ್ ಹೇಳಿದ್ದು, ಪರೋಕ್ಷವಾಗಿ ಡಿಕೆಶಿ ಪರ ಬ್ಯಾಟ್ ಬೀಸಿದ್ದಾರೆ.ನಗರದ ತಮ್ಮ ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಂತರ ರಾಜ್ಯದಲ್ಲಿ ಒಕ್ಕಲಿಗರಿಗೆ ಮುಖ್ಯಮಂತ್ರಿಯಾಗುವ ಅವಕಾಶ ಸಿಕ್ಕಿಲ್ಲ. ಹಾಗಾಗಿ ಒಕ್ಕಲಿಗರಿಗೆ ಮುಖ್ಯಮಂತ್ರಿ ಸ್ಥಾನ ನೀಡಿದರೆ ಉತ್ತಮ ಎಂದು ವೈಯಕ್ತಿಕವಾಗಿ ಹೇಳಿದ್ದೇನೆ.