ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಬಳಿಕ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕೆ.ಎಸ್.ಈಶ್ವರಪ್ಪ ಪರ ಮಂತ್ರಿಗಿರಿಯ ಕೂಗು ಜೋರಾಗಿಯೇ ಕೇಳಿ ಬರ್ತಿದೆ. ಶಾಸಕ ಕೆ.ಎಸ್.ಈಶ್ವರಪ್ಪ ಮತ್ತೆ ಮಂತ್ರಿಯಾಗಲಿ.ಚಳಿಗಾಲದ ಅಧಿವೇಶನಕ್ಕೂ ಮುನ್ನ ಮತ್ತೆ ಸಚಿವರಾಗಲಿ ಎಂದು ಶಿವಮೊಗ್ಗ ನಗರದ ಕೋಟೆ ಆಂಜನೇಯ ದೇವಸ್ಥಾನದಲ್ಲಿ ಈಶ್ವರಪ್ಪ ಬೆಂಬಲಿಗರು ವಿಶೇಷ ಪೂಜೆ ಸಲ್ಲಿಸಿದ್ದಾರೆ.