ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕೆಂದು ಜನಸಾಮಾನ್ಯರ ಬಯಕೆಯಾಗಿದ್ದು, ಈ ನಿಟ್ಟಿನಲ್ಲಿ ಬಿಜೆಪಿ ಸಾಮಾಜಿಕ ಜಾಲತಾಣ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ಸಕ್ರಿಯವಾಗಿ ಕೆಲಸ ಮಾಡಬೇಕೆಂದು ಶಾಸಕ ಬಿ.ಸುರೇಶಗೌಡ ತಿಳಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಸೋಷಿಯಲ್ ಮೀಡಿಯಾ ಅಕ್ಟೀವ್ ಇದ್ದಷ್ಟು ಹೆಚ್ಚು ಮತದಾರರನ್ನು ತಲುಪಲು ಸಾಧ್ಯ ಎಂದರು. ಕಾಂಗ್ರೆಸ್ನ ಬಿಟ್ಟಿ ಭಾಗ್ಯಗಳಿಗೆ ಮನಸೋತು ಮತ ನೀಡಿದ ರಾಜ್ಯದ ಜನತೆ ಕೇವಲ ಮೂರು ತಿಂಗಳಲ್ಲಿ ಕಾಂಗ್ರೆಸ್ ಆಡಳಿತದಿಂದ ಭ್ರಮನಿರಸನಗೊಂಡಿದ್ದಾರೆ. ಬಿಟ್ಟಿ ಭಾಗ್ಯಗಳಿಂದ ಅಭಿವೃದ್ಧಿಗೆ