ಉಡುಪಿ : ಮುಸಲ್ಮಾನರು ಹಲಾಲ್ ಮಾಡುವುದಾದರೆ ಮಾಡಲಿ.ಹಿಂದೂಗಳು ಜಟ್ಕಾ ಮಾಡುವುದಾದರೆ ಮಾಡಿಕೊಂಡು ಹೋಗಲಿ, ಅವರವರು ಅವರವರ ಪದ್ಧತಿಯನ್ನು ಮುಂದುವರಿಸಿಕೊಂಡು ಹೋಗಲಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದಲ್ಲಿ ದೇಶದಲ್ಲೇ ಪ್ರಪ್ರಥಮ ಅತಿದೊಡ್ಡ ಘನ ತ್ಯಾಜ್ಯ ಸಂಸ್ಕರಣ ಘಟಕ ಉದ್ಘಾಟನೆ ಮಾಡಿ, ಮಾಧ್ಯಮಗಳ ಜೊತೆ ಮಾತನಾಡಿ, ಮುಸಲ್ಮಾನರು ನಮ್ಮ ಮನೆಗೆ ಬಂದು ಏನು ಒತ್ತಡ ಹಾಕುವುದಿಲ್ಲ.ನಾನು ಯಾರು ಮುಸಲ್ಮಾನರ ಮನೆಗೆ ಹೋಗಿ ಒತ್ತಡ